Breaking
6 Jul 2026, Mon

ಕಾಲೇಜು ವಿದ್ಯಾರ್ಥಿನಿ ಮೇಲೆ ಚೂರಿ ದಾಳಿ; ಆರೋಪಿ ಪರಾರಿ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಇಂದು (ಜು.06) ಕಾಲೇಜಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆ ಯತ್ನಿಸಿದ ಘಟನೆ ನಡೆದಿದೆ.


ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.


ವಿದ್ಯಾರ್ಥಿನಿ ಬಸ್ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಅಲ್ಲೇ ಇದ್ದ ಇತರ ಪ್ರಯಾಣಿಕರು ಜೋರಾಗಿ ಕಿರುಚಿದ ಪರಿಣಾಮ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.


ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿನಿಯ ಆರೋಗ್ಯ ಹಾಗೂ ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.


ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಘಟನೆಯ ನಿಜವಾದ ಕಾರಣ ಬೆಳಕಿಗೆ ಬರಬೇಕಿದೆ.

Leave a Reply

Your email address will not be published. Required fields are marked *