Breaking
6 Jul 2026, Mon

ವಿದ್ಯಾರ್ಥಿನಿ ಮೇಲೆ ಚೂರಿ ಇರಿತ ಪ್ರಕರಣ: ಪೊಲೀಸರಿಗೆ ಶರಣಾದ ಆರೋಪಿ ಬಂಧನ

ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ಮಂಚಿ ನಿವಾಸಿ, 28 ವರ್ಷದ ಮೊಹಮ್ಮದ್ ಜವ್ವಾರ್ ಎಂದು ಗುರುತಿಸಲಾಗಿದೆ.

ಆರೋಪಿ ಮೊಹಮ್ಮದ್ ಜವ್ವಾರ್ ಮೋಂತಿಮಾರು ಪಡ್ಪು ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ.

ಘಟನೆ ನಡೆಯುತ್ತಿದ್ದ ವೇಳೆ ಬಸ್‌ಗಾಗಿ ಕಾಯುತ್ತಿದ್ದ ಇತರ ಪ್ರಯಾಣಿಕರು ಜೋರಾಗಿ ಕಿರುಚಿದ ಪರಿಣಾಮ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಆತ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಪೊಲೀಸರು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *