ಮಂಡ್ಯ: ಕ್ರಿಕೆಟ್ ಬೆಟ್ಟಿಂಗ್‌ನಿಂದ ಲಕ್ಷಾಂತರ ರೂಪಾಯಿ ಸಾಲದ ಬರೆ ಹೊತ್ತಿದ್ದ ಯುವಕನೋರ್ವ ತಂದೆಗೆ ವಿಡಿಯೋ ಸಂದೇಶ ಕಳುಹಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಡ್ಯಾಂ ಸಮೀಪದ ವಿಸಿ ನಾಲೆಯಲ್ಲಿ ರವಿವಾರ (ಜು.05) ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿರಣ್ (27) ಮೃತ ಯುವಕ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕಿರಣ್ ಐಪಿಎಲ್ ಸೇರಿದಂತೆ ವಿವಿಧ ಕ್ರಿಕೆಟ್ ಪಂದ್ಯಗಳ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದು, ಇದಕ್ಕಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಸಾಲ ಮರುಪಾವತಿಗೆ ಸಾಲದಾರರು ನಿರಂತರ ಒತ್ತಡ ಹೇರಿದ್ದರಿಂದ ಮನನೊಂದು ತಂದೆಗೆ ವಿಡಿಯೋ ಸಂದೇಶ ಕಳುಹಿಸಿದ ಬಳಿಕ ಕೆ.ಆರ್.ಎಸ್. ಬಳಿಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.
ಈ ಕುರಿತು ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



