ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬೆಳ್ತಂಗಡಿ ಮಂಡಲ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮದಿನಾಚರಣೆಯನ್ನು ಜುಲೈ 6ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿಗಳಾದ ಜಯಾನಂದ ಕಲ್ಲಾಪು ಹಾಗೂ ಪ್ರಭಾಕರ ಸವಣಾಲು, ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಆರ್. ಲಾಯಿಲ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





