ಮಂಗಳೂರು: ತಮ್ಮ ಜನ್ಮದಿನದ ಪ್ರಯುಕ್ತ ಶ್ರೀಮತಿ ಅರ್ಚನಾ ಅರುಣ್ ಮಲ್ಯ ಇವರು ಕುದ್ರೋಳಿಯ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಮೂಲಕ ಕುತ್ತಾರು ಬಾಲ ಸಂರಕ್ಷಣಾ ಕೇಂದ್ರದಲ್ಲಿ ಊಟ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಶ್ವತ್ ಪೈ ಅವರು ಮಕ್ಕಳಿಗೆ ಸಿಹಿತಿಂಡಿ ಹಂಚಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿ ಚಾರಿಟೇಬಲ್ ಟ್ರಸ್ಟ್‌ನ ಪ್ರಮುಖರು ಹಾಗೂ ಸದಸ್ಯರು ಉಪಸ್ಥಿತರಿದ್ದು, ಮಕ್ಕಳೊಂದಿಗೆ ಸಮಯ ಕಳೆಯುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.




