Breaking
7 Jul 2026, Tue

ಬ್ರಹ್ಮಾವರದಲ್ಲಿ ಭಾರೀ ಗಾಳಿ-ಮಳೆ ಅಬ್ಬರ: 15 ಮನೆಗಳಿಗೆ ಹಾನಿ, ಶಾಲೆಯ ಹೆಂಚು ಬಿದ್ದು ವಿದ್ಯಾರ್ಥಿನಿಗೆ ಗಾಯ

ಬ್ರಹ್ಮಾವರ: ನಿನ್ನೆ ರಾತ್ರಿಯಿಂದ ಜಿಲ್ಲೆಯ ಕೆಲವೆಡೆ ಸುರಿದ ಭಾರೀ ಮಳೆ ಹಾಗೂ ಬಲವಾದ ಗಾಳಿಯಿಂದ ವ್ಯಾಪಕ ಹಾನಿ ಸಂಭವಿಸಿದೆ. ಸುಮಾರು 15 ಮನೆಗಳು ಹಾನಿಗೊಳಗಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ.


ಸೋಮವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ವಾರಂಬಳ್ಳಿ ಗ್ರಾಮದ ಬ್ರಹ್ಮಾವರ ಬೋರ್ಡ್ ಪ್ರಾಥಮಿಕ ಶಾಲೆಯಲ್ಲಿ ಬಲವಾದ ಗಾಳಿಯ ಪರಿಣಾಮ ಹಳೆಯ ಶಾಲಾ ಕಟ್ಟಡದ ಛಾವಣಿಯ ಹೆಂಚುಗಳು ಉದುರಿಬಿದ್ದಿವೆ. ಈ ವೇಳೆ ಶಾಲಾ ವಿದ್ಯಾರ್ಥಿನಿಯೊಬ್ಬಳ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆ ನೀಡಲಾಗಿದೆ. ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.


ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅನೇಕ ಕಡೆ ಮರಗಳು ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಹಾಗೂ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆಯಾಗಿದೆ.


ಕಳೆದ ಕೆಲವು ದಿನಗಳಿಂದ ನೈರುತ್ಯ ಮಾನ್ಸೂನ್ ದುರ್ಬಲವಾಗಿದ್ದರೂ, ದಿಡೀರ್ ಸುರಿದ ಭಾರೀ ಮಳೆ ಹಾಗೂ ಬಲವಾದ ಗಾಳಿಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.

Leave a Reply

Your email address will not be published. Required fields are marked *