Breaking
7 Jul 2026, Tue

ಜೈನ್ ಸರ್ಜಿಕಲ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ – ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಅನಾಹುತ ತಪ್ಪಿತು

ಬಂಟ್ವಾಳ: ಬಿಸಿರೋಡು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿರುವ ಭಾರತ್ ಸ್ಟೋರ್ ಕಾಂಪ್ಲೆಕ್ಸ್ ನ ಮೇಲಂತಸ್ತಿನಲ್ಲಿರುವ ಜೈನ್ ಸರ್ಜಿಕಲ್ ಅಂಗಡಿಯಲ್ಲಿ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ರಾತ್ರಿ ಸುಮಾರು 8 ಗಂಟೆ ವೇಳೆಗೆ ಅಂಗಡಿಯೊಳಗೆ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ತಕ್ಷಣ ಅಂಗಡಿ ಮಾಲಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.


ಸೂಚನೆ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣ ಹಾಗೂ ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *