Breaking
7 Jul 2026, Tue

ಮೊಗ್ರು ಗ್ರಾಮದ ಪ್ರಗತಿಪರ ಕೃಷಿಕ ವಿಶ್ವನಾಥ ಗೌಡ ನಿಧನ

ಮೊಗ್ರು: ಗ್ರಾಮದ ಪುಂಡುಪಿಲ ನಿವಾಸಿ, ಪ್ರಗತಿಪರ ಕೃಷಿಕ ವಿಶ್ವನಾಥ ಗೌಡ (64) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 4ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ನೀಲಮ್ಮ, ಪುತ್ರ ಹಾಗೂ ಬಂದಾರು ಪಂಚಾಯತ್ ಮಾಜಿ ಸದಸ್ಯ, ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಶಿವಪ್ರಸಾದ್, ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ನಿವಾಸಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ (ಧರ್ಮಸ್ಥಳ), ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ (ಕಡಮ್ಮಾಜೆ ಫಾರ್ಮ್ಸ್), ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರ ಚಂದ್ರಹಾಸ ಗೌಡ ದೇವಸ್ಯ ಗುತ್ತು, ಜನಪ್ರತಿನಿಧಿಗಳು ಹಾಗೂ ಹಲವಾರು ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.

Leave a Reply

Your email address will not be published. Required fields are marked *