Breaking
22 Aug 2026, Sat

ಕಣಿಯೂರಿನಲ್ಲಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಸಾಧಕರಿಗೆ ಸನ್ಮಾನ

ಬಂಟರ ಯಾನೆ ನಾಡವರ ಸಂಘ ಕಣಿಯೂರು ಗ್ರಾಮ ಸಮಿತಿ ವತಿಯಿಂದ ವಾರ್ಷಿಕ ಮಹಾಸಭೆ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಸನ್ಮಾನ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜುಲೈ 5 ರಂದು ಪದ್ಮುಂಜ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳಗಾವಿಯ ಉದ್ಯಮಿ ಆನಂದ ಎನ್. ಶೆಟ್ಟಿ ಪಣೆಕ್ಕರ ಉದ್ಘಾಟಿಸಿದರು. ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಅಂಬಡ್ಕ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ವಕ್ತಾರರಾಗಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ರವೀಂದ್ರ ದರ್ಬೆ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ವಿಜಯ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಅಜಿತ್ ಶೆಟ್ಟಿ ಕೊರ್ಯಾರು, ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ, ಕಣಿಯೂರು ವಲಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಅನಸೂಯಾ ಶಂಭು ರೈ ಮೊರಂತಾಜೆ, ಗ್ರಾಮ ಸಮಿತಿಯ ಗೌರವಾಧ್ಯಕ್ಷ ಉದಯ ಕುಮಾರ್ ಮೇಲಾಂಟ, ಬೆಳ್ತಂಗಡಿ ಬಂಟರ ಸಂಘದ ನಿರ್ದೇಶಕ ಪುರಂದರ ಶೆಟ್ಟಿ ಪಣೆಕ್ಕರ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಯಶಸ್ವಿ ಉದ್ಯಮಿಯಾಗಿ ಅನೇಕರಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಆನಂದ ಎನ್. ಶೆಟ್ಟಿ ಪಣೆಕ್ಕರ, ಶಿಕ್ಷಣ ಕ್ಷೇತ್ರದ ಸೇವೆಗಾಗಿ ಸುಜಾತ ಶೆಟ್ಟಿ ಮೊಗರೋಡಿ (ಪಿ.ಆರ್. ಶೆಟ್ಟಿ ಮೆಮೋರಿಯಲ್ ಟ್ರಸ್ಟ್), ಚಾರ್ಟರ್ಡ್ ಅಕೌಂಟೆಂಟ್ ರಕ್ಷಿತ್ ಶೆಟ್ಟಿ ಅಂತರ, ಎಸ್‌ಕೆಡಿಆರ್‌ಡಿಪಿ ಪ್ರಾದೇಶಿಕ ನಿರ್ದೇಶಕಿ ದಯಾಶೀಲಾ ಆಳ್ವ, ಪದ್ಮುಂಜ ಮಿಲ್ಕ್ ಸೊಸೈಟಿಯ ನೂತನ ಕಾರ್ಯದರ್ಶಿ ಸತೀಶ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ವಿಲಾಸ್ ಶೆಟ್ಟಿ ಪುಣ್ಕೆದಡಿ ಅವರಿಗೆ ವಿಶೇಷ ಸನ್ಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಗೀತಾ ಸುನಿಲ್ ಶೆಟ್ಟಿ ಪುದ್ದೋಟ್ಟು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರೆ, ಸಂಘದ ಮಹಿಳಾ ಪದಾಧಿಕಾರಿಗಳು ಪ್ರಾರ್ಥನೆ ನೆರವೇರಿಸಿದರು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಜಯರಾಮ್ ಶೆಟ್ಟಿ ಕೆರೆಕೋಡಿ ವಾಚಿಸಿದರು. ಕಾರ್ಯಕ್ರಮವನ್ನು ಗ್ರಾಮ ಸಮಿತಿ ಉಪಾಧ್ಯಕ್ಷ ಹಾಗೂ ವಕೀಲ ಯತೀಶ್ ಶೆಟ್ಟಿ ಪಣೆಕ್ಕರ ನಿರೂಪಿಸಿದರು.

Leave a Reply

Your email address will not be published. Required fields are marked *