Breaking
8 Jul 2026, Wed

ವಿಟ್ಲದಲ್ಲಿ ಲಾರಿ ಬ್ಯಾಟರಿ ಕಳ್ಳತನ: ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ

ವಿಟ್ಲ: ವಿಟ್ಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕಾಸರಗೋಡು ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಎಂದು ಗುರುತಿಸಲಾಗಿದೆ.


ಬಂಧಿತರಿಂದ ಕಳವು ಮಾಡಲಾಗಿದ್ದ 10 ಲಾರಿ ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ಕುರಿತು ವಿಟ್ಲ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *