ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜುಲೈ 6ರಂದು ವಿಟ್ಲ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ನಿವಾಸಿ ರಾಜೇಶ್ (41) ಬಂಧಿತ ಆರೋಪಿಯಾಗಿದ್ದಾನೆ.
ಈತ ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ ಕಳ್ಳತನ ಪ್ರಕರಣದ ಐಪಿಸಿ ಕಲಂ 379 ಆರೋಪಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿಟ್ಲ ಠಾಣೆಯ ಎಎಸ್‌ಐ ಜಯರಾಮ್, ಸಿಪಿಸಿ ವೆಂಕಪ್ಪ ಹಾಗೂ ಸಿಪಿಸಿ ಶಿವಾನಂದ ಅವರ ತಂಡ ಮಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿತು.

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



