Breaking
8 Jul 2026, Wed

12 ವರ್ಷದ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ ಬರುಯಿಪುರ್ನಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಬಾಶ್ ಮಂಡಲ್ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ.


ಪೊಲೀಸರ ಪ್ರಕಾರ, ಬುಧವಾರ ನಸುಕಿನ ವೇಳೆ ಆರೋಪಿಯನ್ನು ಅಪರಾಧ ನಡೆದ ಸ್ಥಳಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಆತ ಪೊಲೀಸ್ ಸಿಬ್ಬಂದಿಯೊಬ್ಬರ ಬಂದೂಕನ್ನು ಕಸಿದುಕೊಂಡು ಗುಂಡಿನ ದಾಳಿ ನಡೆಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಬುಧವಾರ ರಾತ್ರಿ ಸುಮಾರು 12.45ರ ವೇಳೆಗೆ ಬರುಯಿಪುರ್ ಪೊಲೀಸ್ ಠಾಣೆಯ ತನಿಖಾ ತಂಡ ಆರೋಪಿಯನ್ನು ಸೂರ್ಯಾಪುರ ಪ್ರದೇಶಕ್ಕೆ ಕರೆದುಕೊಂಡು ಹೋಗಿತ್ತು. ಇದೇ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು.


ಪ್ರಬಾಶ್ ಮಂಡಲ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅಪರಾಧಕ್ಕೂ ಮುನ್ನ ಬಾಲಕಿಯೊಂದಿಗೆ ಆತ ಕಾಣಿಸಿಕೊಂಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.


ಇದೇ ವೇಳೆ, ಪ್ರಕರಣದ ತನಿಖೆ ಕುರಿತು ಶೀಘ್ರ ವರದಿ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರವು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.


ಇನ್ನೊಂದೆಡೆ, ಬಾಲಕಿಯ ಮೃತದೇಹ ಪತ್ತೆಯಾದ ಬಳಿಕ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿ, ಪೊಲೀಸ್ ವಾಹನಗಳು ಹಾಗೂ ರೈಲ್ವೆ ಹಳಿಗಳಿಗೆ ಹಾನಿ ಉಂಟು ಮಾಡಿದ ಸುಮಾರು 200 ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಎನ್ಕೌಂಟರ್ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *