Breaking
8 Jul 2026, Wed

ಕೊಪ್ಪದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ, ಇನ್ನೋವಾ ಜಪ್ತಿ – ಆರೋಪಿಗಳು ಪರಾರಿ

ಕೊಪ್ಪ: ತಾಲ್ಲೂಕಿನ ಗಡಿಕಲ್ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇನ್ನೋವಾ ಕಾರನ್ನು ಕೊಪ್ಪ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಜಪ್ತಿ ಮಾಡಿರುವ ಘಟನೆ ಜುಲೈ 7ರ ಮಂಗಳವಾರ ನಡೆದಿದೆ.

ಮಾಹಿತಿಯಂತೆ, ಕಾರಿನ ನೋಂದಣಿ ಫಲಕವನ್ನು ತೆಗೆದು ಹಾಕಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬಿ ಸಾಗಿಸಲಾಗುತ್ತಿತ್ತು. ಪೊಲೀಸರು ವಾಹನವನ್ನು ಬೆನ್ನಟ್ಟುತ್ತಿದ್ದಂತೆ ಆರೋಪಿಗಳು ಕಾರನ್ನು ರಸ್ತೆಯಲ್ಲೇ ಬಿಟ್ಟು ಕತ್ತಲಿನ ಪ್ರಯೋಜನ ಪಡೆದು ಪರಾರಿಯಾಗಿದ್ದಾರೆ.

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾರಿನಲ್ಲಿದ್ದ ಎರಡು ಗೋವುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳು ಶೋಧ ಕಾರ್ಯ ಮುಂದುವರಿಸಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಮೂಕಪ್ರಾಣಿಗಳ ಜೀವ ಉಳಿದಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಗೋವು ಕಳ್ಳತನ ಮತ್ತು ಅಕ್ರಮ ಸಾಗಾಟದ ಜಾಲ ಸಕ್ರಿಯವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ರಾತ್ರಿ ವೇಳೆ ಪೊಲೀಸ್ ಗಸ್ತು ಇನ್ನಷ್ಟು ಬಲಪಡಿಸಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *