Breaking
9 Jul 2026, Thu

ಅಂಬುಲೆನ್ಸ್ ಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಅಂಬುಲೆನ್ಸ್ ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.


ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕೆಲ ಯುವಕರು ರಸ್ತೆಯ ಮಧ್ಯಭಾಗದಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್ಗೆ ದಾರಿ ನೀಡದೆ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದ್ದರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ತನಿಖೆ ನಡೆಸಿ, ವೀಲಿಂಗ್ ಮಾಡಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.


ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಇಂತಹ ಅಪಾಯಕಾರಿ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *