Breaking
9 Jul 2026, Thu

ಉಡುಪಿ ರೆಸಾರ್ಟ್ನಲ್ಲಿ ಜೂಜಾಟಕ್ಕೆ ಪೊಲೀಸ್ ದಾಳಿ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತು ವಶ

ಉಡುಪಿ: ಪೆರ್ಡೂರು ಗ್ರಾಮದ ಖಾಸಗಿ ರೆಸಾರ್ಟ್ನ ಕೊಠಡಿಯಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ವೇಳೆ ಹಿರಿಯಡಕ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ಬಂಧಿಸಿದ್ದಾರೆ.


ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ₹1.31 ಲಕ್ಷ ನಗದು ಸೇರಿದಂತೆ ಒಟ್ಟು ₹17.81 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಜೂಜಾಟಕ್ಕೆ ಅವಕಾಶ ಕಲ್ಪಿಸಿದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಿತ ರೆಸಾರ್ಟ್ನ ಪರವಾನಿಗೆಯನ್ನು ರದ್ದುಪಡಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರಕರಣ ದಾಖಲಿಸಿಕೊಂಡಿರುವ ಹಿರಿಯಡಕ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *