Breaking
2 Sep 2026, Wed

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್; ಹಾಲಿನ ಟ್ಯಾಂಕರ್ ಗೂ ಬೆಂಕಿ ವ್ಯಾಪ್ತಿ

ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಸಮೀಪದಲ್ಲಿದ್ದ ಹಾಲಿನ ಟ್ಯಾಂಕರ್ ಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ.


ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ಕ್ಷಣಾರ್ಧದಲ್ಲೇ ಬೆಂಕಿಗಾಹುತಿಯಾಗಿದೆ. ಇದೇ ವೇಳೆ ಸಮೀಪದಲ್ಲಿ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್ಗೂ ಬೆಂಕಿ ವ್ಯಾಪಿಸಿ, ಎರಡೂ ವಾಹನಗಳು ಹೊತ್ತಿ ಉರಿದಿವೆ.


ಅದೃಷ್ಟವಶಾತ್ ಎರಡೂ ಲಾರಿಗಳ ಚಾಲಕರು ಸಮಯಪ್ರಜ್ಞೆ ಮೆರೆದು ವಾಹನಗಳಿಂದ ಹೊರಗೆ ಜಿಗಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಬೆಂಕಿಯ ತೀವ್ರತೆಗೆ ಎರಡೂ ಲಾರಿಗಳು ಬಹುತೇಕ ಸುಟ್ಟು ಭಸ್ಮವಾಗಿವೆ.


ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಎಂಬ ದಿಸೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *