Breaking
9 Jul 2026, Thu

ಬಂಟ್ವಾಳದಲ್ಲಿ ದುರ್ಘಟನೆ: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು

ಬಂಟ್ವಾಳ: ತಾಲೂಕಿನ ಪೆರ್ನೆ ಗ್ರಾಮದ ನೂಜಿನಡ್ಕದಲ್ಲಿ ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.


ಮೃತರನ್ನು ಚಂದಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.
ಚಂದಪ್ಪ ಅವರು ನೂಜಿನಡ್ಕ ಪ್ರದೇಶದಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಮರದ ಗೆಲ್ಲುಗಳನ್ನು ಕತ್ತರಿಸುವ ವೇಳೆ ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ಗೆಲ್ಲು ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.


ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯ ನಡೆಸಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಘಟನೆಯ ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *