Breaking
2 Sep 2026, Wed

ಮಡಂತ್ಯಾರು: ಪಣಕಜೆ ಸಮೀಪ ಕಾರು ಪಲ್ಟಿ; ಮೂವರು ಅಪಾಯದಿಂದ ಪಾರು

ಮಡಂತ್ಯಾರು: ಪಣಕಜೆ ಸಮೀಪ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜುಲೈ 9ರಂದು ನಡೆದಿದೆ.

ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರುದಲ್ಲಿ ಮೂವರು ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *