ಮಂಗಳೂರು: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಫೋನ್‌ಗಳು ಪತ್ತೆಯಾಗಿದ್ದು, ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಹೊಂದಿದ್ದ ಕೈದಿಗಳನ್ನು ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಎಂದು ಗುರುತಿಸಲಾಗಿದೆ.

ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಅವರು ಸಿಬ್ಬಂದಿಯೊಂದಿಗೆ ‘ಎ’ ಬ್ಲಾಕ್‌ನ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ ವೇಳೆ ಮೊಹಮ್ಮದ್ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿ ಇದ್ದ ಮೊಹಮ್ಮದ್ ಇಕ್ಬಲ್ ಬಳಿಯೂ ಮತ್ತೊಂದು ಮೊಬೈಲ್ ಪತ್ತೆಯಾಗಿದೆ.





