ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಸಂತ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಪೋಡುಂಬ ಅವರನ್ನು ಆಯ್ಕೆ ಮಾಡಲಾಗಿದೆ.

ಸಂದೀಪ್ ಶೆಟ್ಟಿ ಅವರು ಸಿದ್ದಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿಯ ಅಧ್ಯಕ್ಷರಾಗಿದ್ದು, ಸಿದ್ದಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದಲ್ಲದೆ, ಹಲವು ಸಾಮಾಜಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶತಮಾನೋತ್ಸವ ಆಚರಣಾ ಸಮಿತಿಯ ಕಾರ್ಯದರ್ಶಿಯಾಗಿ ರತೀಶ್ ಶೆಟ್ಟಿ ಕೊನೆರಬೆಟ್ಟು ಹಾಗೂ ಕೋಶಾಧಿಕಾರಿಯಾಗಿ ಶಾಲೆಯ ಮುಖ್ಯ ಶಿಕ್ಷಕಿ ರೀಟಾ ಅವರನ್ನು ಆಯ್ಕೆ ಮಾಡಲಾಗಿದೆ.

ಶತಮಾನೋತ್ಸವವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಿಸುವ ಉದ್ದೇಶದಿಂದ ವಿವಿಧ ಉಪಸಮಿತಿಗಳಿಗೆ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.







