Breaking
2 Sep 2026, Wed

ಮದುವೆಯಾಗಿ ಎರಡು ತಿಂಗಳಲ್ಲೇ ದುರಂತ: ನವವಿವಾಹಿತೆ ಆತ್ಮಹತ್ಯೆ

ಕೇರಳ: ಮದುವೆಯಾಗಿ ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೇರಳದಲ್ಲಿ ನಡೆದಿದೆ.


ಮೃತರನ್ನು ವೆಟ್ಟೂರು ನಿವಾಸಿ 19 ವರ್ಷದ ನಾಸಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ನಾಸಿಯಾಳನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ನಾಸಿಯಾ ಅವರು ಅನ್ಜರ್ ಎಂಬುವವರನ್ನು ವಿವಾಹವಾಗಿದ್ದರು. ಅನ್ಜರ್ ಕುವೈತ್ನಲ್ಲಿ ಉದ್ಯೋಗದಲ್ಲಿದ್ದು, ಮದುವೆಯಾದ ಕೇವಲ ಎರಡು ವಾರಗಳಲ್ಲೇ ಕೆಲಸದ ನಿಮಿತ್ತ ವಿದೇಶಕ್ಕೆ ತೆರಳಿದ್ದರು.


ಗಂಡನಿಂದ ದೂರವಾಗಿರುವುದು ನಾಸಿಯಾಗೆ ತೀವ್ರವಾಗಿ ಮನಸ್ಸಿಗೆ ತಟ್ಟಿದ್ದು, ವಿರಹದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕುರಿತು ಅವರು ಹಲವು ಬಾರಿ ಕುಟುಂಬದವರ ಬಳಿ ತಮ್ಮ ನೋವನ್ನು ಹಂಚಿಕೊಂಡಿದ್ದರು ಎಂದು ತಿಳಿದುಬಂದಿದೆ. ಇದಲ್ಲದೆ, ಕುಟುಂಬದಲ್ಲಿ ಯಾವುದೇ ರೀತಿಯ ಕಲಹ ಅಥವಾ ಇತರ ಸಮಸ್ಯೆಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.


ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *