Breaking
2 Sep 2026, Wed

ಅಪ್ರಾಪ್ತನಿಗೆ ಬೈಕ್ ನೀಡಿದ ತಂದೆಗೆ ₹25 ಸಾವಿರ ದಂಡ; ನ್ಯಾಯಾಲಯದ ಮಹತ್ವದ ಆದೇಶ

ಕಿತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ನೀಡುವ ಪೋಷಕರಿಗೆ ಎಚ್ಚರಿಕೆಯ ಸಂದೇಶವಾಗಿ ಇಲ್ಲಿನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಪ್ರಕರಣದಲ್ಲಿ ತಾಲೂಕಿನ ಎಂ.ಕೆ. ಹುಬ್ಬಳ್ಳಿಯ ನಿವಾಸಿ ನಜೀರಸಾಬ್ ಅತ್ತಾರ ಅವರಿಗೆ ನ್ಯಾಯಾಧೀಶ ಮಹಮ್ಮದಲಿ ನಾಯಕ್ ಅವರು ₹25,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡುವುದು ಕಾನೂನುಬಾಹಿರ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಪಾಯಕಾರಿ ಎಂಬುದನ್ನು ನ್ಯಾಯಾಲಯ ತನ್ನ ಆದೇಶದಲ್ಲಿ ಒತ್ತಿ ಹೇಳಿದೆ. ನಿಯಮ ಉಲ್ಲಂಘಿಸಿ ಮಗನಿಗೆ ಬೈಕ್ ನೀಡಿದ್ದ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *