Breaking
11 Jul 2026, Sat

ಮಂಗಳೂರು: ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಖಾಸಗಿ ಬಸ್ ಕಂಡಕ್ಟರ್ ಬಂಧನ

ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಜುಲೈ 10ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆತ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಗುರಿಯಾಗಿಸಿಕೊಂಡು ಆರೋಪಿ ಅಸಭ್ಯ ವರ್ತನೆ ತೋರಿದ್ದು, ಅಶ್ಲೀಲ ಸನ್ನೆಗಳನ್ನು ಮಾಡಿದ್ದಾನೆ. ಜೊತೆಗೆ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿಯನ್ನು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *