Breaking
11 Jul 2026, Sat

ಬಂಟ್ವಾಳ: ಅಂಬ್ಯುಲೆನ್ಸ್‌ಗೆ ದಾರಿ ಬಿಡುವ ವೇಳೆ ಸರಣಿ ಅಪಘಾತ; ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಅಂಬ್ಯುಲೆನ್ಸ್‌ಗೆ ದಾರಿ ಬಿಡುವ ವೇಳೆ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲ್ಲೂಕಿನ ಭಂಡಾರಿಬೆಟ್ಟು ಸಮೀಪ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸೈರನ್ ಮೊಳಗಿಸುತ್ತಾ ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಪಿಕಪ್ ವಾಹನ ಹಾಗೂ ಕಾರಿನ ಚಾಲಕರು ತಮ್ಮ ವಾಹನಗಳ ವೇಗವನ್ನು ಕಡಿಮೆ ಮಾಡಿ ರಸ್ತೆ ಬದಿಗೆ ಸರಿಯಲು ಪ್ರಯತ್ನಿಸಿದ್ದಾರೆ.

ಈ ವೇಳೆ ಹಿಂದಿನಿಂದ ಬರುತ್ತಿದ್ದ ಸರ್ಕಾರಿ ಬಸ್‌ ಚಾಲಕನಿಗೆ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ಮೊದಲು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಮುಂದೆ ಇದ್ದ ಪಿಕಪ್ ವಾಹನಕ್ಕೂ ಢಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂರು ವಾಹನಗಳಿಗೂ ಸಣ್ಣ ಪ್ರಮಾಣದ ಹಾನಿಯಾಗಿದ್ದು, ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.

Leave a Reply

Your email address will not be published. Required fields are marked *