ತುಳುನಾಡ ಜವನೆರ್, ಹೊಸ್ಮಾರು ಇವರ ಆಯೋಜನೆಯಲ್ಲಿ ಹಾಗೂ ಊರ-ಪರವೂರ ದಾನಿಗಳ ಸಹಕಾರದೊಂದಿಗೆ ಆಗಸ್ಟ್ 23, ಭಾನುವಾರ ಬೆಳಿಗ್ಗೆ 8:30 ಗಂಟೆಗೆ ಹೊಸ್ಮಾರು ಬಲ್ಗೊಟ್ಟು, ಕೊರಗಜ್ಜ ದೈವಸ್ಥಾನದ ಸಮೀಪದ ಗದ್ದೆಯಲ್ಲಿ ಸಮಸ್ತ ಹಿಂದೂ ಬಾಂಧವರಿಗಾಗಿ ಪ್ರಪ್ರಥಮ ಬಾರಿಗೆ ‘ಕೆಸರ ಕಂಡೊಡು ಗೊಬ್ಬುದೋಕುಲಿ – ಕೆಸರ್ಡೊಂಜಿ ದಿನ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಪುರುಷರಿಗೆ ವಾಲಿಬಾಲ್, ಕಬಡ್ಡಿ ಹಾಗೂ ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗಜಗ್ಗಾಟ, ಮಕ್ಕಳಿಗೆ ವಿಶೇಷ ರೀತಿಯ ಪ್ರತ್ಯೇಕ ಸ್ಪರ್ಧೆಗಳು ನಡೆಯಲಿವೆ.

ಈ ವಿಶಿಷ್ಟ ಗ್ರಾಮೀಣ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಭ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತುಳುನಾಡ ಜವನೆರ್, ಹೊಸ್ಮಾರು ಸಂಘಟನೆಯ ಗೌರವ ಸಲಹೆಗಾರರು, ಕಾರ್ಯಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಮಸ್ತ ಹಿಂದೂ ಬಾಂಧವರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.




