Breaking
2 Sep 2026, Wed

ಫರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ; ಸ್ಲ್ಯಾಬ್‌ಗೆ ತೂತು ಮಾಡಿ ಒಳನುಗ್ಗಲು ಪ್ರಯತ್ನ

ಬಂಟ್ವಾಳ: ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ಮಿನೇಜಸ್ ಪ್ಲಾಜಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕ್ ಪರಂಗೀಪೇಟೆ ಶಾಖೆಯಲ್ಲಿ ಜು. 12ರಂದು ರಾತ್ರಿ ವೇಳೆ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ.

ಜು. 13ರ ಸೊಮವಾರ ಬೆಳಿಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದ್ದು, ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಪ್ರಸ್ತುತ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ, ಸೋಕೋ ತಂಡ ಗಳು ಭೇಟಿ ನೀಡಿದ್ದು, ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ.

ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *