Breaking
14 Jul 2026, Tue

ಆಟವಾಡುತ್ತಾ ಗ್ರಿಲ್ ಹತ್ತಿ ಕೆಳಗೆ ಬಿದ್ದು 4 ವರ್ಷದ ಬಾಲಕಿ ಗಂಭೀರ

ಚಿಕ್ಕಬಳ್ಳಾಪುರ: ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕಿ ಗ್ರಿಲ್ ಹತ್ತಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ-ಮಧು ದಂಪತಿಯ ಪುತ್ರಿ ಗಗನ ಸಿಂಧು ಪೋಷಕರೊಂದಿಗೆ ಬಟ್ಟೆ ಖರೀದಿಸಲು ಅಂಗಡಿಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪೋಷಕರು ಬಟ್ಟೆ ಖರೀದಿಯಲ್ಲಿ ನಿರತರಾಗಿದ್ದ ಸಮಯದಲ್ಲಿ ಬಾಲಕಿ ಅಂಗಡಿಯ ಗ್ರಿಲ್ ಮೇಲೆ ಹತ್ತಿ ಆಟವಾಡುತ್ತಿತ್ತು. ಒಂದೆರಡು ಬಾರಿ ತಾಯಿ ಮಗುವನ್ನು ಒಳಗೆ ಕರೆದುಕೊಂಡು ಬಂದಿದ್ದರೂ, ಮತ್ತೆ ಗ್ರಿಲ್ ಬಳಿ ತೆರಳಿದ ಬಾಲಕಿ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ.

ತಕ್ಷಣ ಗಾಯಗೊಂಡ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಸ್ಥಳೀಯರು ಪೋಷಕರು ಮಕ್ಕಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಎಚ್ಚರಿಕೆಯಿಂದ ಗಮನಿಸಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *