Breaking
3 Sep 2026, Thu

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಪರಾರಿ; ಭದ್ರತಾ ವೈಫಲ್ಯಕ್ಕೆ ತೀವ್ರ ಚರ್ಚೆ

ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಯ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ಘಟನೆ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಂಗಳವಾರ ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಮಸ್ತಾನ್, ಸಂತೋಷ್ ಹಾಗೂ ಸಾಗರ್ ಎಂಬ ಮೂವರು ಕೈದಿಗಳು ಯೋಜಿತ ರೀತಿಯಲ್ಲಿ ಜೈಲಿನ ಎತ್ತರದ ಕಾಂಪೌಂಡ್ ಗೋಡೆ ಹಾರಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಹೊರವಲಯದ ಬೀದರ್–ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಕೇಂದ್ರ ಕಾರಾಗೃಹದಲ್ಲಿ ಬಿಗಿ ಭದ್ರತೆ ಇದ್ದರೂ ಕೈದಿಗಳು ಪರಾರಿಯಾಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಗೃಹ ಸಚಿವರ ತವರಿನಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿ ಹಾಗೂ ಪೊಲೀಸರು ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕೈದಿಗಳ ಪರಾರಿಯಲ್ಲಿ ಒಳಗಿನಿಂದ ಯಾರಾದರೂ ಸಹಾಯ ಮಾಡಿದ್ದಾರೆಯೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *