ಕಲಬುರಗಿ: ಚಿಂಚೋಳಿ ತಾಲೂಕಿನ ಐನೊಳಿ ಗ್ರಾಮದಲ್ಲಿ ಆಟೋ ಡಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳವಾರ (ಜುಲೈ 14) ಬೆಳಿಗ್ಗೆ ನಡೆದಿದೆ.

ಐನೊಳಿ ಗ್ರಾಮದ ಸಂಜೀವ ಕುಮಾರ ಸುರೇಶ್ (6) ಮೃತ ಬಾಲಕ.
ಮಂಗಳವಾರ ಬೆಳಿಗ್ಗೆ ಸುಮಾರು 8 ಗಂಟೆಗೆ ಸುರೇಶ್ ರಸ್ತೆ ಬದಿಯಲ್ಲಿ ಕುಳಿತಿದ್ದ ವೇಳೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಳಿಕ ಆಟೋ ಚಾಲಕ ವೀರಪ್ಪ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ





