Breaking
21 Jun 2026, Sun

ಬೋಳಂತೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು 30 ಲಕ್ಷ ನಗದು ಲೂಟಿ!

ವಿಟ್ಲ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ.

ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ. ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *