Breaking
15 Jul 2026, Wed

ಸುರತ್ಕಲ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಕಟ್ಟಡದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 14ರ ಮಂಗಳವಾರ ಸಂಜೆ ನಡೆದಿದೆ.

ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಪೋಷಕರೊಂದಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದರು. ಮಂಗಳವಾರ ಕಟೀಲು ದೇವಸ್ಥಾನಕ್ಕೆ ತೆರಳಿ ಮನೆಗೆ ಮರಳಿದ ಬಳಿಕ ಅವರು ಏಕಾಏಕಿ 3ನೇ ಮಹಡಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ತಲೆಗೆ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಸಾವಿನ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *