Breaking
3 Sep 2026, Thu

ಉಪ್ಪಿನಂಗಡಿ: ಮನೆಯಲ್ಲಿ ನೇಣು ಬಿಗಿದು 25 ವರ್ಷದ ಯುವಕ ಆತ್ಮಹತ್ಯೆ

ಉಪ್ಪಿನಂಗಡಿ: 25 ವರ್ಷದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಯಡ್ಕದ ಬೊಳ್ಳಾವು ಗ್ರಾಮದಲ್ಲಿ ನಡೆದಿದೆ.

ರಂಗಪ್ಪ ಗೌಡ ಅವರ ಪುತ್ರ ಯೋಗೀಶ್ ಯಾನೆ ಸಂಕೇತ್ (25) ಮೃತ ಯುವಕ. ಕೂಲಿ ಕಾರ್ಮಿಕರಾಗಿದ್ದ ಅವರು ಜುಲೈ 13ರಂದು ರಾತ್ರಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗೆ ಶಿವಮೊಗ್ಗದ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *