ಬೆಳ್ತಂಗಡಿ: ತಾಲ್ಲೂಕಿನ ಸೌತಡ್ಕದ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಘಟನೆ ಮಂಗಳವಾರ (ಜು. 14) ನಡೆದಿದೆ.

ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಫಾತಿಮತ್ ಸಹದಿಯಾ (4) ಗಾಯಗೊಂಡ ಬಾಲಕಿ. ಅಂಗನವಾಡಿಯ ಕೊಠಡಿಯಲ್ಲಿ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ. ಬಾಲಕಿ ಅಳಲಾರಂಭಿಸಿದಾಗ ಅಂಗನವಾಡಿ ಸಹಾಯಕಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.





