ಕೇರಳ: ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಸಮೀಪದ ಕುನ್ನುಂಪುರಂನಲ್ಲಿ ಸೋಮವಾರ ನಡೆದಿದೆ.

ಮನೆಯಲ್ಲೇ ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಆಕಸ್ಮಿಕವಾಗಿ ಬಾಲಕನ ಗಂಟಲಲ್ಲಿ ಸಿಲುಕಿದೆ. ಇದರಿಂದ ಉಸಿರಾಟದ ತೊಂದರೆ ಉಂಟಾಗಿ ಬಾಲಕ ಅಸ್ವಸ್ಥಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಕುಟುಂಬದವರು ಬಾಲಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



