ಬಂಟ್ವಾಳ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ಶಾಂತಿ ಅಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 15ರ ಬುಧವಾರ ನಡೆದಿದೆ.

ಅಪಘಾತದಲ್ಲಿ ಪಾದಚಾರಿಗಳಾದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್ ಅಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




