Breaking
16 Jul 2026, Thu

ಮಂಗಳೂರು: ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್; ಯುವಕನಿಗೆ ₹7,000 ದಂಡ

ಮಂಗಳೂರು: ಸ್ಕೂಟರ್‌ನಲ್ಲಿ ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಾ ಸಾರ್ವಜನಿಕ ರಸ್ತೆಯಲ್ಲಿ ಸವಾರಿ ಮಾಡಿದ್ದ ಯುವಕನಿಗೆ ಮಂಗಳೂರು ನಗರ ಸಂಚಾರ ಪೊಲೀಸರು ₹7,000 ದಂಡ ವಿಧಿಸಿದ್ದಾರೆ.

ಕೊಣಾಜೆ ಸಮೀಪ ಕಳೆದ ಮಾರ್ಚ್‌ನಲ್ಲಿ ವಿದ್ಯಾರ್ಥಿಯೊಬ್ಬ ರಸ್ತೆಯಲ್ಲಿ ಸ್ಟಂಟ್ ನಡೆಸಿದ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಇದಲ್ಲದೆ, ಸಂಚಾರ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಯುವಕನ ಚಾಲನಾ ಪರವಾನಗಿ (ಡಿಎಲ್) ರದ್ದುಗೊಳಿಸುವಂತೆ ಸಾರಿಗೆ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗಿದೆ.

Leave a Reply

Your email address will not be published. Required fields are marked *