ಮಂಗಳೂರು: ಬೆಂಗಳೂರಿನಲ್ಲಿ ನಡೆದ ಬಾಸ್ಕೆಟ್‌ಬಾಲ್ ಟೂರ್ನಮೆಂಟ್‌ಗೆ ತೆರಳಿದ್ದ ಮಂಗಳೂರಿನ ವಿದ್ಯಾರ್ಥಿಗಳಿಗೆ ತರಬೇತುದಾರರಿಂದ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಜೀರೋ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನ ಕ್ಲಬ್‌ವೊಂದರ ತರಬೇತುದಾರ ವಿದ್ಯಾರ್ಥಿಗಳನ್ನು ಸ್ಪರ್ಧೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದರು. ಅಲ್ಲಿ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾದರಿಯಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಮುಂದಿನ ತನಿಖೆಗಾಗಿ ಪ್ರಕರಣವನ್ನು ಉಪ್ಪಾರಪೇಟೆ ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




