Breaking
16 Jul 2026, Thu

ಶಸ್ತ್ರಚಿಕಿತ್ಸೆ ವೇಳೆ 9 ವರ್ಷದ ಬಾಲಕ ಸಾವು; ವೈದ್ಯರ ನಿರ್ಲಕ್ಷ್ಯ ಶಂಕೆ

ಕಾಸರಗೋಡು: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ 9 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಮೃತ ಬಾಲಕನನ್ನು ಬೇಡಗ ನಿವಾಸಿಗಳಾದ ಅಶ್ರಫ್ ಮತ್ತು ಬುಶ್ರಾ ದಂಪತಿಯ ಪುತ್ರ ಇಯಾಸ್ ಎಂದು ಗುರುತಿಸಲಾಗಿದೆ.


ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಇಯಾಸ್ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ಸಂದರ್ಭದಲ್ಲೇ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಇದೇ ಸಾವಿಗೆ ಕಾರಣ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.


ಆದರೆ, ವೈದ್ಯರ ನಿರ್ಲಕ್ಷ್ಯವೇ ತಮ್ಮ ಮಗನ ಸಾವಿಗೆ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು, ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರತರುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *