Breaking
4 Sep 2026, Fri

ಬಿ. ಸಿ ರೋಡ್ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಯುವತಿಯ ಹತ್ಯೆಗೈದು ಆರೋಪಿ ಪರಾರಿ

ಬಂಟ್ವಾಳ : ಬಿ. ಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಯುವತಿಯನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಇಂದು ನಡೆದಿದೆ.

ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದ್ದು ಯುವತಿ ಬಸ್ ನಿಂದ ಕೆಳಗಿಳಿದ ಬಳಿಕ ಯುವಕನೋರ್ವ ತನ್ನ ಬ್ಯಾಗ್ ನಿಂದ ಅರಿತವಾದ ಆಯುಧದಿಂದ ಬೆನ್ನಟ್ಟಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬಂಟ್ವಾಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

Leave a Reply

Your email address will not be published. Required fields are marked *