ಕಾಪು: ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ, ಕಾಪುವಿನಲ್ಲಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತರನ್ನು ಉಳಿಯಾರಗೋಳಿ ಕೈಪುಂಜಲು ನಿವಾಸಿ ಲಕ್ಷಿ ಹರಿನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಅವರು ಪಾಕತಜ್ಞರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ತಮ್ಮ ಮನೆಯಿಂದ ಕೋತಲಕಟ್ಟೆಗೆ ಬಂದಿದ್ದ ಅವರು, ಅಲ್ಲಿಂದ ಕಾಪುವಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಲಕ್ಷಿ ಹರಿನಾರಾಯಣ ಭಟ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



