Breaking
17 Jul 2026, Fri

ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಜು.17) ಬೆಳಕಿಗೆ ಬಂದಿದೆ.


ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಎಚ್.ಎಂ ಎಂದು ಗುರುತಿಸಲಾಗಿದೆ.


ಬೆಳಿಗ್ಗೆ ಶೌಚಾಲಯ ಸ್ವಚ್ಛಗೊಳಿಸಲು ಸಿಬ್ಬಂದಿ ತೆರಳಿದ ವೇಳೆ ಘಟನೆ ಪತ್ತೆಯಾಗಿದೆ. ಅವರು ಶೌಚಾಲಯದ ಕಿಟಕಿಗೆ ತಮ್ಮ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.


ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *