Breaking
5 Sep 2026, Sat

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜು.18ರಂದು ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶನಿವಾರ (ಜು.18) ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಜೊತೆಗೆ ಪದವಿ ಪೂರ್ವ ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ.

ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯ ಹಿನ್ನೆಲೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *