Breaking
18 Jul 2026, Sat

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ 28 ವರ್ಷದ ಯುವಕನೊಬ್ಬ ಹೊಸನಗರ ತಾಲೂಕಿನ ಕಟ್ಟಿನಹೊಳೆ ಗ್ರಾಮದಲ್ಲಿ ಮೃತಪಟ್ಟಿರುವ ಘಟನೆ ಜುಲೈ 17ರ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಅವರು ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸ್ಥಳೀಯ ಸ್ನೇಹಿತನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಿಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಯೋಜನೆ ರೂಪಿಸಿದ್ದರು.

ಆದರೆ ಶುಕ್ರವಾರ ರಾತ್ರಿ ಏಕಾಏಕಿ ಶ್ರೀಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾಗಿ ಕುಸಿದು ಬಿದ್ದಿದ್ದಾರೆ. ಸ್ನೇಹಿತರು ಕೂಡಲೇ ಅವರನ್ನು ಹೊಸನಗರ ಆಸ್ಪತ್ರೆಗೆ ಕರೆದೊಯ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತದೇಹವನ್ನು ಹೊಸನಗರ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *