Breaking
6 Sep 2026, Sun

ಮನೆಯಲ್ಲಿ ನೇಣು ಬಿಗಿದು ವಿವಾಹಿತೆ ಆತ್ಮಹತ್ಯೆ

ಮೂಡಬಿದಿರೆ: ಮೂಡಬಿದಿರೆ ತಾಲೂಕಿನ ಮಿಜಾರು ಕೊಪ್ಪದಕುಮೇರಿಯಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಜು.17) ಸಂಜೆ ನಡೆದಿದೆ.

ಮೃತರನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಮೂಡಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತ ಸ್ನೇಹಾ ಅವರು ಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *