Breaking
6 Sep 2026, Sun

ಮಟ್ಕಾ ಜುಗಾರಿ ಆರೋಪಿ ಉಡುಪಿ ಜಿಲ್ಲೆಯಿಂದ ಗಡಿಪಾರು

ಉಡುಪಿ: ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಆರೋಪಿಯಾಗಿರುವ ರಾಮರಾಜ್ ಅಲಿಯಾಸ್ ರಮೇಶ ಅರಸ್ (48) ಎಂಬಾತನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.


ಆರೋಪಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಇನ್ನೊಂದು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ.


ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಮರಾಜ್ ಅಲಿಯಾಸ್ ರಮೇಶ ಅರಸ್ ಅವರನ್ನು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *