ಬಿ.ಸಿ.ರೋಡ್: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಗೌಡ ಅವರ ಹತ್ಯೆ ಅತ್ಯಂತ ಖಂಡನೀಯ ಘಟನೆ ಎಂದು ಬೇಬಿ ಕುಂದರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, “ಹಾಡುಹಗಲೇ ನಡೆದ ಈ ಭೀಕರ ಹತ್ಯೆಯಿಂದ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಭಯಭೀತರಾಗಿದ್ದಾರೆ. ಇಂತಹ ಕೃತ್ಯ ಎಸಗಿದ ಆರೋಪಿಗೆ ಕಾನೂನು ಪ್ರಕಾರ ಶೀಘ್ರ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ನ್ಯಾಯ ಒದಗಿಸುವ ಮೂಲಕ ಸಾರ್ವಜನಿಕರಲ್ಲಿ ಕಾನೂನು ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಬೇಕು. ಜೊತೆಗೆ ಸಾರ್ವಜನಿಕರಿಗೆ ಧೈರ್ಯ ತುಂಬುವಂತಹ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ, “ಮೃತ ಲಾವಣ್ಯ ಗೌಡ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಪ್ರಾರ್ಥಿಸಿದ್ದಾರೆ.



