Breaking
20 Jul 2026, Mon

ಬಂದಾರಿನಲ್ಲಿ ಕರುವಿನ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

ಬಂದಾರು: ಗ್ರಾಮದ ಪೆರ್ಲ–ಬೈಪಾಡಿ ಅಡೆಂಕಿರಿಮಜಲು ಪ್ರದೇಶದ ಸೇಸಪ್ಪ ಗೌಡ ಅವರ ದನದ ಹಟ್ಟಿಯಲ್ಲಿ ಜುಲೈ 19ರ ಮುಂಜಾನೆ ಸುಮಾರು 2.30 ಗಂಟೆಗೆ ಚಿರತೆ ಕರುವಿನ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ.

ಕಳೆದ ಹಲವು ದಿನಗಳಿಂದ ಕಾಡಂಡ ಹಾಗೂ ಬೈಪಾಡಿ ಭಾಗಗಳಲ್ಲಿ ಚಿರತೆ ಸಂಚರಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಚಿರತೆಯನ್ನು ಸೆರೆಹಿಡಿಯಲು ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *