Breaking
20 Jul 2026, Mon

ಬಿ.ಸಿ.ರೋಡ್ ನಲ್ಲಿ ಲಾವಣ್ಯ ಗೌಡ ಹತ್ಯೆ ಖಂಡನೀಯ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಪ್ರಜ್ವಲ್ ಶೆಟ್ಟಿ

ಬಿ.ಸಿ.ರೋಡ್: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಗೌಡ ಅವರ ಹತ್ಯೆ ಅತ್ಯಂತ ಖಂಡನೀಯ ಘಟನೆ ಎಂದು ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, “ಹಾಡುಹಗಲೇ ನಡೆದ ಈ ಭೀಕರ ಹತ್ಯೆಯಿಂದ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಆತಂಕಕ್ಕೊಳಗಾಗಿದ್ದಾರೆ. ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಯ ವಿರುದ್ಧ ಕಾನೂನು ಪ್ರಕಾರ ಶೀಘ್ರ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು.

ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ಮೂಲಕ ಸಾರ್ವಜನಿಕರಲ್ಲಿ ಕಾನೂನು ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಇನ್ನಷ್ಟು ಬಲಪಡಿಸಬೇಕು” ಎಂದು ಒತ್ತಾಯಿಸಿದರು.

ಇದಲ್ಲದೆ, ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮೃತ ಲಾವಣ್ಯ ಗೌಡ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಜ್ವಲ್ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *