ಉಡುಪಿ: ಜಿಲ್ಲೆಯ ಕಟಪಾಡಿಯ ಸಾಮರಸ್ಯ ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸರ್ವಕಲ ಸೇವಾ ಟ್ರಸ್ಟ್ ಅಧ್ಯಕ್ಷರು ಹಾಗೂ ರಕ್ತದಾನಿ ನೀಮಾ ಲೋಬೊ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕೃಷಿ, ರಕ್ತದಾನ, ಸಂಗೀತ ಸೇರಿದಂತೆ ವಿವಿಧ ಸಾಮಾಜಿಕ ಮತ್ತು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಅವರ ಸೇವೆಯನ್ನು ಗುರುತಿಸಿ ಈ ಸನ್ಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ನೀಮಾ ಲೋಬೊ ಅವರ ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿದರು.



