Breaking
6 Sep 2026, Sun

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದಿದ್ದ ಮೀನುಗಾರನ ಮೃತದೇಹ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನ ಮಂಜಿ ದಕ್ಕೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಮೀನುಗಾರನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ.
ಮೃತರನ್ನು ಆಂಧ್ರಪ್ರದೇಶದ ಬೆೈನಾಪಲ್ಲಿ ನಿವಾಸಿ ಬೊನ್ನ (40) ಎಂದು ಗುರುತಿಸಲಾಗಿದೆ. ಅವರು ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನುಗಾರಿಕೆ ಸಂಬಂಧಿತ ಕೆಲಸ ಮಾಡುತ್ತಿದ್ದರು.


ಜುಲೈ 17ರಂದು ಬೆಳಗ್ಗೆ ಮಂಜಿ ದಕ್ಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು.


ಜುಲೈ 19ರಂದು ಬೆಳಗ್ಗೆ ಅವರು ನೀರಿಗೆ ಬಿದ್ದಿದ್ದ ಸ್ಥಳದ ಸಮೀಪವೇ ಮೃತದೇಹ ತೇಲಿಬಂದಿದ್ದು, ಬಳಿಕ ಅದನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.


ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *